ರಣ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ: ಮಳೆಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆ

dakshinakannada rain
07/07/2023

ರಣ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಬಲಿಯಾದವ್ರ ಸಂಖ್ಯೆ ನಾಲ್ಕಕ್ಕೇರಿದೆ.

ಮನೆ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ.

ಮೃತರನ್ನು ಮುಹಮ್ಮದ್ ಎಂಬುವವರ ಪತ್ನಿ ಝರೀನಾ(47) ಎಂದು ಗುರುತಿಸಲಾಗಿದೆ. ಅವರ ಪುತ್ರಿ ಸಫಾ(20) ಎಂಬುವವರನ್ನು ರಕ್ಷಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಬೆಳಗ್ಗೆ  ಮುಹಮ್ಮದ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದಿದೆ. ಈ ವೇಳೆ ಝರೀನಾ ಮತ್ತು ಸಫಾ ಕುಸಿದ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣಾ ಕಾರ್ಯ ಕೈಗೊಂಡರೂ ಅಷ್ಟರಲ್ಲಿ ಝರೀನಾ ಸಾವನ್ನಪ್ಪಿದ್ದರು.

ಸಫಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw


ಕರ್ನಾಟಕ ಬಜೆಟ್ ಮಂಡನೆ ಆರಂಭ | LIVE ನೋಡಿ

 

ಇತ್ತೀಚಿನ ಸುದ್ದಿ

Exit mobile version