ಕಾಡಾನೆ ದಾಳಿಗೆ ಮತ್ತೊಬ್ಬ ಮಹಿಳೆ ಬಲಿ: ಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿಯಿಂದ‌ ಸಾವಿನ ಸರದಿ - Mahanayaka
10:08 AM Thursday 21 - August 2025

ಕಾಡಾನೆ ದಾಳಿಗೆ ಮತ್ತೊಬ್ಬ ಮಹಿಳೆ ಬಲಿ: ಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿಯಿಂದ‌ ಸಾವಿನ ಸರದಿ

vinoda
08/02/2025


Provided by

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕೂಲಿಗಾಗಿ ವಿಜಯನಗರ ಜಿಲ್ಲೆಯಿಂದ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು.

ಇಂದು ಬೆಳಗ್ಗೆ ಕಾಫಿ ಹಣ್ಣು ಕೊಯ್ಯುವಾಗ ತೋಟದಲ್ಲಿದ್ದ ಕಾಡಾನೆ ಏಕಾಏಕಿ  ದಾಳಿ ಮಾಡಿದ್ದು, ಪರಿಣಾಮವಾಗಿ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ