ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ - Mahanayaka

ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರಿಂದ ಸಾಮಾಜಿಕ ಬಹಿಷ್ಕಾರ

nagaraj and wife
27/08/2021

ತುಮಕೂರು: ಅಂತರ್ಜಾತಿ ವಿವಾಹವಾಗಿದ್ದಕ್ಕೆ ದಂಪತಿಗೆ ಸವರ್ಣಿಯರು ಹಲ್ಲೆ, ಕಿರುಕುಳ ನೀಡಿ, ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇಲ್ಲಿನ ಚಿ.ನಾ.ಹಳ್ಳಿ ತಾಲೂಕಿನ ಕೋರೆಗೆರೆ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ಇನ್ನೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಯಾಗಿದೆ.

ಚಿ.ನಾ.ಹಳ್ಳಿ ತಾಲೂಕು ಕೋರಗೆರೆ ಗ್ರಾಮದ ದಲಿತ ಯುವಕ ನಾಗರಾಜು ಹಾಗೂ ಶೆಟ್ ಬಣಜಿಗ ಜಾತಿಯ ಮಹಿಳೆ ಪರಸ್ಪರ ಪ್ರೀತಿಸಿ 2007ರಲ್ಲಿ  ವಿವಾಹವಾಗಿದ್ದರು. ವಿವಾಹದ ಬಳಿಕ ಅದೇ ಗ್ರಾಮದಲ್ಲಿ ವಾಸವಿದ್ದರು. ಇವರಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಂತರ್ಜಾತಿ ವಿವಾಹವಾಗಿ ಸಂತೋಷದಿಂದ ಬದುಕುತ್ತಿರುವ ಇವರ ಕುಟುಂಬವನ್ನು ನೋಡಿ ಹೊಟ್ಟೆ ಉರಿದುಕೊಂಡ ಸವರ್ಣಿಯರು ಈ ಕುಟುಂಬಕ್ಕೆ ಇದೀಗ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ನಮ್ಮ  ಜಮೀನಿನಲ್ಲಿಯೇ ಕೂಲಿ ಕೃಷಿ ಮಾಡಿಕೊಂಡು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ನಮ್ಮ ಮೇಲೆ ಕಿರುಕುಳ ನಡೆಸಲಾಗುತ್ತಿದ್ದು, ಈ ಗ್ರಾಮದಲ್ಲಿ ಇರಬಾರದು ಎಂದು ಬಹಿಷ್ಕಾರ ಹಾಕಿದ್ದಾರೆ. ಕುಡಿಯುವ ನೀರು, ಅಂಗಡಿಗಳಲ್ಲಿ ಸಾಮಾನು ಕೂಡ ನಮಗೆ ಕೊಡುತ್ತಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ.

ಇನ್ನೂ ಈ ಬಗ್ಗೆ ಹುಳಿಯಾರು ಠಾಣೆಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ.  ಪೊಲೀಸರು ಸಮಸ್ಯೆಗೆ ಪರಿಹಾರ ನೀಡುವ ಬದಲು ರಾಜಿ ಮಾಡಿಸಲು ಮುಂದಾಗಿದ್ದಾರೆ.  ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಮಾಡಿದ್ದೇವೆ. ಅವರು ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆ ಎಂದು ದಂಪತಿ ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ಧರ್ಮದ ಹೆಸರಿನಲ್ಲಿ ಗೂಂಡಾಗಿರಿ | 5 ಮಂದಿಯ ವಿರುದ್ಧ ದೂರು

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ

ಗೃಹ ಸಚಿವರನ್ನು ರೇಪ್ ಮಾಡಿದ ಕಾಂಗ್ರೆಸ್ ನಾಯಕರ ಮೇಲೆ ಕೇಸ್ ಮಾಡಿ | ಡಿ.ಕೆ.ಶಿವಕುಮಾರ್ ಲೇವಡಿ

ಬಾಲಕಿಗೆ ಮನೆ ಮಾಲಿಕನಿಂದ ಲೈಂಗಿಕ ಕಿರುಕುಳ | ಆರೋಪಿಯ ಬಂಧನ

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ