ಭ್ರಷ್ಟ, ಭಂಡ ಸರಕಾರದಿಂದ ಜನವಿರೋಧಿ ರಾಜಕೀಯ: ಗೋವಿಂದ ಕಾರಜೋಳ ಆಕ್ಷೇಪ - Mahanayaka
2:26 AM Monday 15 - September 2025

ಭ್ರಷ್ಟ, ಭಂಡ ಸರಕಾರದಿಂದ ಜನವಿರೋಧಿ ರಾಜಕೀಯ: ಗೋವಿಂದ ಕಾರಜೋಳ ಆಕ್ಷೇಪ

kaveri
23/09/2023

ಬೆಂಗಳೂರು: ಡಿಎಂಕೆ ಸರಕಾರ ಮತ್ತು ಐಎನ್‍ಡಿಐಎ ಒಕ್ಕೂಟವನ್ನು ಮೆಚ್ಚಿಸುವ ಉದ್ದೇಶದಿಂದ ರಾಜ್ಯದ ಕಾಂಗ್ರೆಸ್ ಸರಕಾರವು ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು.


Provided by

ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಅವರು ಆಗ್ರಹಿಸಿದರು.

ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಲು ಅವರು ಒತ್ತಾಯಿಸಿದರು. ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ ಎಂದು ಅವರು ಎಚ್ಚರಿಸಿದರು.
ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರಕಾರವು ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಪಿ.ಸಿ.ಮೋಹನ್ ಅವರು ಆಕ್ಷೇಪಿಸಿದರು. ರಾಜ್ಯದ ಜನರನ್ನು ಬಲಿ ಕೊಡಲು ಈ ಸರಕಾರ ವಿಫಲವಾಗಿದೆ. ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಟೀಕಿಸಿದರು.

ಒಂದೆಡೆ ಖಾಲಿ ಕೊಡ ಹಿಡಿಯುವ ಸ್ಥಿತಿ ಇದೆ. ಇನ್ನೊಂದೆಡೆ ಬ್ರ್ಯಾಂಡ್ ಬೆಂಗಳೂರು ಎಂದು ತಿಳಿಸಿದರೆ ಹೇಗೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ಸಿನ ನಡತೆ ಖಂಡನೀಯ ಎಂದು ತಿಳಿಸಿದರು. ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ