5:26 PM Thursday 16 - October 2025

ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಕೊರೊನಾಕ್ಕೆ ಬಲಿ

anupama
18/04/2021

ಬೆಂಗಳೂರು:  ಕೊರೊನಾ ಅಟ್ಟಹಾಸಕ್ಕೆ ರಾಜ್ಯದ ಜನತೆ ತತ್ತರಿಸುತ್ತಿದ್ದಾರೆ. ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

41 ವರ್ಷ ವಯಸ್ಸಿನ ಅನುಪಮಾ ಅವರು ಕರ್ನಾಟಕ ಹಾಕಿ ಅಸೋಸಿಯೇಷನ್ ಕಾರ್ಯಕಾರಿ ಮಂಡಳಿ ಸದಸ್ಯೆ ಕೂಡ ಆಗಿದ್ದರು. ಕಳೆದ ಒಂದು ವಾರದಿಂದ ಮಹಾಮಾರಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಅಸ್ವಸ್ಥರಾಗಿದ್ದರು.

ಕೊರೊನಾದಿಂದ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅನುಪಮಾ ಇದೀಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

Exit mobile version