ಕಾಂಗ್ರೆಸ್ ಗೆ ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ: ಸಿಎಂ ಸಿದ್ದರಾಮಯ್ಯ
28/08/2023
ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಪಕ್ಷ ಬಿಟ್ಟು ಹೋದವರಷ್ಟೇ ಅಲ್ಲ, ಯಾರೇ ಬಂದರೂ ಸ್ವಾಗತ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಲಸಿಗ ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಮರು ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?, ಬಿಜೆಪಿ ದಿವಾಳಿಯಾಗಿದೆ. ಈವರೆಗೂ ವಿಪಕ್ಷ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.
ಪ್ರಧಾನಿ ಮೋದಿಯೇ ಭೇಟಿಗೆ ಬರಬೇಡಿ ಎಂದಿದ್ದರಂತೆ ಎಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಬಿಜೆಪಿ ನಾಯಕರನ್ನು ಹೊರಗಿಟ್ಟಿರುವ ವಿಚಾರವನ್ನು ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ರು.

























