ಅಂಗನವಾಡಿಯಲ್ಲಿ ಅಡುಗೆ ಮಾಡಿ ಮರಳುತ್ತಿದ್ದ ಮಹಿಳೆಯರು ಸೇರಿದಂತೆ 13 ಮಂದಿ ಅಪಘಾತಕ್ಕೆ ಬಲಿ - Mahanayaka
10:17 PM Thursday 16 - October 2025

ಅಂಗನವಾಡಿಯಲ್ಲಿ ಅಡುಗೆ ಮಾಡಿ ಮರಳುತ್ತಿದ್ದ ಮಹಿಳೆಯರು ಸೇರಿದಂತೆ 13 ಮಂದಿ ಅಪಘಾತಕ್ಕೆ ಬಲಿ

gwalior
23/03/2021

ಗ್ವಾಲಿಯರ್: ಆಟೋವೊಂದಕ್ಕೆ ರಿಕ್ಷಾ ಡಿಕ್ಕಿಯಾದ ಪರಿಣಾಮ 13 ಜನರು ದಾರುಣವಾಗಿ ಸಾವನ್ನಪ್ಪಿದ ಘಟನೆ  ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದ್ದು, ಅಪಘಾತದ ಪರಿಣಾಮ  ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಉಳಿದವರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.


Provided by

ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂದಿರುಗುತ್ತಿದ್ದ  12 ಮಂದಿ ಮಹಿಳೆಯರನ್ನು ಆಟೋ ಚಾಲಕ ಅವರ ಮನೆಗೆ ಬಿಡಲು ತೆರಳುತ್ತಿದ್ದ. ಈ ವೇಳೆ ವೇಗವಾಗಿ ಬಂದ ಬಸ್, ಆಟೋ ರಿಕ್ಷಾಕ್ಕೆ ಅಪ್ಪಳಿಸಿದೆ.

ಮಧ್ಯಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಈ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.

ಇತ್ತೀಚಿನ ಸುದ್ದಿ