ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು  ಸ್ಥಳದಲ್ಲಿಯೇ ಸಾವು - Mahanayaka
8:41 PM Thursday 14 - November 2024

ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು  ಸ್ಥಳದಲ್ಲಿಯೇ ಸಾವು

13/02/2021

ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರೆಲ್ಲರು ಬೆಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದೆ.

ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ