8:40 AM Thursday 16 - October 2025

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

jail
04/02/2023

ಉಡುಪಿ: ನಾಲ್ಕು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು 10 ವರ್ಷ ಜೈಲುಶಿಕ್ಷೆ ವಿಧಿಸಿ ಶನಿವಾರ ಆದೇಶಿಸಿದೆ.

ಶಿಕ್ಷೆಗೆ ಗುರಿಯಾಗಿರುವ ಆರೋಪಿಯನ್ನು  ಪಡುಬಿದ್ರೆಯ  ಉಮೇಶ್ ಬಂಗೇರ(45) ಎಂದು‌ ಗುರುತಿಸಲಾಗಿದೆ. ಈತ ಪಡುಬಿದ್ರೆಯಲ್ಲಿ ಕರಾಟೆ ತರಗತಿ ನಡೆಸುತ್ತಿದ್ದು, 2020ರ ಫೆ.12ರಂದು ಕರಾಟೆ ತರಗತಿಗೆ ಬಂದಿದ್ದ 12ವರ್ಷ ವಯಸ್ಸಿನ ಬಾಲಕಿ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ದನು. ಈ ಬಗ್ಗೆ 2020ರ ಸೆ.27ರಂದು ಬಾಲಕಿಯ ತಾಯಿ‌ ಆರೋಪಿ ವಿರುದ್ಧ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಪೊಕ್ಸೋ ಕಾಯಿದೆಯಡಿ 10ವರ್ಷ ಜೈಲುಶಿಕ್ಷೆ ಮತ್ತು 10ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ, ಲೈಂಗಿಕ ದೌರ್ಜನ್ಯ ಪ್ರಕರಣದಡಿ 10ವರ್ಷ ಜೈಲುಶಿಕ್ಷೆ ಮತ್ತು 10ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಾದಾ ಸಜೆ, ಕೊಲೆಬೆದರಿಕೆ ಪ್ರಕರಣದಡಿ ಒಂದು ವರ್ಷ ಸಜೆ ಮತ್ತು ಒಂದು ಸಾವಿರ ರೂ. ದಂಡ ಮತ್ತು ತಪ್ಪಿದಲ್ಲಿ ಒಂದು ತಿಂಗಳ ಸಾದಾ ಸಜೆ, ದೈಹಿಕ ಲೈಂಗಿಕ ಕಿರುಕುಳ ಪ್ರಕರಣದಡಿ ಒಂದು ವರ್ಷ ಜೈಲುಶಿಕ್ಷೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ, ತಪ್ಪಿದಲ್ಲಿ ಒಂದು ತಿಂಗಳ ಹೆಚ್ಚುವರಿ ಸಾದಾ ಸಜೆ ನೀಡಿ ಆದೇಶ ಹೊರಡಿಸಿದ್ದಾರೆ.

ದಂಡದ ಒಟ್ಟು 22ಸಾವಿರ ರೂ. ಮೊತ್ತದಲ್ಲಿ 17000ರೂ. ನೊಂದ ಬಾಲಕಿಗೆ ಪರಿಹಾರವಾಗಿ ಮತ್ತು 5ಸಾವಿರ ರೂ. ಸರಕಾರಕ್ಕೆ ಪಾವತಿಸಬೇಕು. ಅಲ್ಲದೆ ಸರಕಾರ ನೊಂದ ಬಾಲಕಿಗೆ ಒಂದು ಲಕ್ಷ ರೂ. ಪರಿಹಾರ ನೀಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version