11:10 PM Wednesday 15 - October 2025

ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

15/03/2022

ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಕುಕ್ಕರಹಳ್ಳಿ ಕೆರೆಯ ಬೋಟ್ ನಿಲುಗಡೆ ಸ್ಥಳದಲ್ಲಿ ಮಹಿಳೆ ಮೃತದೇಹ ತೇಲುತ್ತಿರುವುದು ಕಂಡುಬಂದಿದ್ದು, ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಸರಸ್ವತಿಪುರಂ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

ಇತ್ತೀಚಿನ ಸುದ್ದಿ

Exit mobile version