ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ - Mahanayaka

ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

job
02/07/2025

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು,  ಪೂರ್ಣಕಾಲಿಕ, ಅರೆಕಾಲಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿಯಿರುವ ಹುದ್ದೆಗಳು: ಕಾನೂನು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಮತ್ತು ಬಿಸಿಎ ಕೋರ್ಸ್​ನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಹುದ್ದೆಗಳ ಭರ್ತಿ.

ಅರ್ಹತೆ: ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ನೀಟ್​​, ಸ್ಲೆಟ್​​ ಹಾಗೂ ಪಿಎಚ್ ​ಡಿ ಪದವಿ ಹೊಂದಿರಬೇಕು.

ಅಭ್ಯರ್ಥಿಗಳು  ಬೆಂಗಳೂರು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿ ಪಡೆದು ಅದರ ಜೊತೆಗೆ ಅಗತ್ಯವಿರುವ ದಾಖಲಾತಿ ಪ್ರಮಾಣ ಪತ್ರದೊಂದಿಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕಡೇಯ ದಿನಾಂಕ ಜುಲೈ 8 ಆಗಿರುತ್ತದೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ ನ ಕಾನೂನು, ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಆಯಾ ಪ್ರಾಂಶುಪಾಲರು/ಅಧ್ಯಕ್ಷರು/ಸಂಯೋಜಕರು, ಜ್ಞಾನಭಾರತಿ ಕ್ಯಾಂಪಸ್​, ಬೆಂಗಳೂರು– 560056

ಹೆಚ್ಚಿನ ಮಾಹಿತಿಗಾಗಿ bangaloreuniversity.karnataka.gov.in ಭೇಟಿ ನೀಡಬಹುದು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ