ಕೃಷಿ ಡಿಪ್ಲೊಮಾ ಕೋರ್ಸ್: ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Agriculture
08/08/2024

2024-25ನೇ ಶೈಕ್ಷಣಿಕ ವರ್ಷದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ. ತೇರ್ಗಡೆಯಾದ 19 ವರ್ಷ ಮೀರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50% ರಷ್ಟು ಮೀಸಲಾತಿ ಇದ್ದು, ಎರಡು ವರ್ಷದ ಡಿಪ್ಲೊಮಾ ಕೋರ್ಸ್ ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನು ವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಪಟ್ಟ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಬೋಧನೆ ಇರುತ್ತದೆ.

ಹಾಗೂ ಕೃಷಿರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

ಆಸಕ್ತರು www.uahs.edu.in ವೆಬ್ ಸೈಟ್ ಎಲ್ಲಾ ಅಧಿಸೂಚನೆಗಳ ಶೀರ್ಷಿಕೆಯಡಿಯಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಆ. 29ರೊಳಗಾಗಿ ಸಲ್ಲಿಸುವಂತೆ ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9480838208ನ್ನು ಅಥವಾ ಕೃಷಿ ಮಹಾವಿದ್ಯಾಲಯವನ್ನು ಖುದ್ದಾಗಿ ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version