ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಂಟಿ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳ ನೇಮಕ - Mahanayaka
5:23 AM Saturday 10 - January 2026

ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಂಟಿ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳ ನೇಮಕ

siddaramaiah
22/05/2023

ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಪಿ.ಎ.ಗೋಪಾಲ್ ಅವರನ್ನು ಮುಖ್ಯಮಂತ್ರಿ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.‌

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಜಂಟಿ ಕಾರ್ಯದರ್ಶಿ ಗೋಪಾಲ್ ಅವರು ಸಿದ್ದರಾಮಯ್ಯ, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿಯೂ ಇದೇ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ್ದರು.

ಪೌರಾಡಳಿತ ಇಲಾಖೆಯಲ್ಲಿ ಪ್ರಸ್ತುತ ಸ್ಥಳ ನಿರೀಕ್ಷೆಯಲ್ಲಿರುವ ಡಾ ಕೆ ವೈಷ್ಣವಿ ಅವರನ್ನು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆಯ ಮೇರೆಗೆ ನೇಮಕ ಮಾಡಲಾಗಿದೆ.

ಅಂತೆಯೇ, ಕೆ.ಎನ್.ವಿಜಯ ಅವರನ್ನೂ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಯಾಗಿ ಗುತ್ತಿಗೆ ಆಧಾರದ ಮೇರೆಗೆ ನೇಮಕ ಮಾಡಲಾಗಿದೆ.

ಈ ಇಬ್ಬರು ವಿಶೇಷ ಕರ್ತವ್ಯಾಧಿಕಾರಿಗಳನ್ನೂ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ