1:12 AM Thursday 13 - November 2025

62 ಯೋಜನೆಗಳಿಗೆ ಅನುಮೋದನೆ: 10,755 ಜನರಿಗೆ ಉದ್ಯೋಗ ಅವಕಾಶ

bengaluru 3
29/11/2023

ಬೆಂಗಳೂರು: 141 ನೇ ರಾಜ್ಯ ಮಟ್ಟದ ಟೆಕ್ ಸಮಿತಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ.

ಬೃಹತ್ ಮತ್ತು ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, 50 ಕೋಟಿ ರೂ.ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 8 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಇವುಗಳಿಂದ ರಾಜ್ಯದಲ್ಲಿ 2,088.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯಾಗಲಿದೆ. ಇವುಗಳಿಂದ 6,360 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. 15 ಕೋಟಿಯಿಂದ 50 ಕೋಟಿ ರೂ. ಮೊತ್ತದ ಒಳಗಿನ ಬಂಡವಾಳ ಹೂಡಿಕೆಯ 51 ಹೊಸ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇವುಗಳಿಂದ 941.40 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,395 ಜನರಿಗೆ ಉದ್ಯೋಗಗಳು ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಸಭೆಯು ಅನುಮೋದಿಸಿದ್ದು ಇದರಿಂದ 577.35 ಕೋಟಿ ರೂ. ಬಂಡವಾಳ ಹೂಡಿಕೆ ಆಗಲಿದೆ ಎಂದು ಚರ್ಚಿಸಲಾಯಿತು.

ಇತ್ತೀಚಿನ ಸುದ್ದಿ

Exit mobile version