10:47 PM Tuesday 20 - January 2026

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ | ಯುವಕ ಅರೆಸ್ಟ್

arrested
03/08/2021

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ 25 ವರ್ಷ ವಯಸ್ಸಿನ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ, ಅತ್ಯಾಚಾರ, ಬಾಲ್ಯವಿವಾಹ ನಿರ್ಬಂಧ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಶರಾವತಿ ನಗರ ನಿವಾಸಿ ಬಂಧಿತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಎರಡು ವರ್ಷಗಳ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಬಾಲಕಿ ತನ್ನ ತಾಯಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಆಸ್ಪತ್ರೆ ಸಮೀಪ ಹಣ್ಣು ಮಾರಾಟ ಮಾಡುತ್ತಿದ್ದ ವ್ಯಕ್ತಿ(ಆರೋಪಿ) ತನ್ನನ್ನು ಪ್ರೀತಿಸುವಂತೆ ಬಾಲಕಿಯ ಬಳಿ ಕೇಳಿಕೊಂಡಿದ್ದ. ಆದರೆ ಬಾಲಕಿ ಅದನ್ನು ನಿರಾಕರಿಸಿದ್ದಳು ಎನ್ನಲಾಗಿದೆ.

ಇದಾದ ಬಳಿಕ ತಾಯಿಯ ಆರೋಗ್ಯ ಸುಧಾರಿಸಿದ್ದು, ಆಕೆ ಊರಿಗೆ ಮರಳಿದ್ದು, ಕೆಲವು ದಿನಗಳಲ್ಲಿ ತಾಯಿ ಸಾವನ್ನಪ್ಪಿದ್ದಳು. ಈ ವೇಳೆ ಮೃತರ ಸಂಬಂಧಿಗಳು, ಬಾಲಕಿಯನ್ನು ಮದುವೆ ಮಾಡಿಕೊಡುವುದರ ಬಗ್ಗೆ ಮಾತಾಡಿಕೊಂಡಿದ್ದರು ಎನ್ನಲಾಗಿದೆ.

ಈ ವೇಳೆ ಬಾಲಕಿ ಶಿವಮೊಗ್ಗದಲ್ಲಿ ಪರಿಚಯವಾಗಿದ್ದ ಆರೋಪಿಗೆ ಕರೆ ಮಾಡಿ ತನ್ನ ಸಮಸ್ಯೆ ಹೇಳಿಕೊಂಡಿದ್ದು, ರಕ್ಷಿಸುವಂತೆ ಮನವಿ ಮಾಡಿದ್ದಾಳೆ ಎನ್ನಲಾಗಿದೆ. ಆತ ಬಾಲಕಿಯನ್ನು ಶಿವಮೊಗ್ಗಕ್ಕೆ ಕರೆಸಿಕೊಂಡು ಆಕೆಯನ್ನು ಮದುವೆಯಾಗಿ ತನ್ನ ಶಾರಾವತಿ ನಗರದ ಮನೆಯಲ್ಲಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ.

ಇನ್ನೂ ಈ ವಿಚಾರ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಆರೋಪಿಯ ಮನೆಗೆ ದಾಳಿ ನಡೆಸಿದ್ದು, ಬಾಲಕಿಯನ್ನು ರಕ್ಷಿಸಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು,  ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳು…

ಪೊಲೀಸರ ವಿರುದ್ಧ ತಿರುಗಿ ಬಿದ್ದ ಆಫ್ರಿಕಾ ಪ್ರಜೆಗಳು | ಲಾಠಿ ರುಚಿ ತೋರಿಸಿದ ಪೊಲೀಸರು

“ಓ ಲಾರ್ಡ್ ಜೀಸಸ್, ಪ್ಲೀಸ್ ಹೆಲ್ಪ್ ಮೀ” ಎಂದು ಎನ್.ಮಹೇಶ್ ಬೇಡುತ್ತಿರುವ ವಿಡಿಯೋ ವೈರಲ್

ಒಂದು ದೇಹದಲ್ಲಿ ಎರಡು ಜೀವ | ಸರ್ಕಾರ ಮತ್ತು ಕಾನೂನಿಗೆ ಸವಾಲಾದ ಸಹೋದರರು

ಸೂತ್ರಧಾರಿ ಕೇಂದ್ರವೂ ಪಾತ್ರಧಾರಿ ನಾಯಕರೂ | ನಾ ದಿವಾಕರ

ಇತ್ತೀಚಿನ ಸುದ್ದಿ

Exit mobile version