ಚಿಕ್ಕಮಗಳೂರಿಗೆ ಪ್ರವಾಸ ಹೊರಟಿದ್ದೀರಾ? ಹಾಗಿದ್ರೆ ಈ ವಿಚಾರ ತಿಳಿದುಕೊಳ್ಳಿ - Mahanayaka

ಚಿಕ್ಕಮಗಳೂರಿಗೆ ಪ್ರವಾಸ ಹೊರಟಿದ್ದೀರಾ? ಹಾಗಿದ್ರೆ ಈ ವಿಚಾರ ತಿಳಿದುಕೊಳ್ಳಿ

chikkamagaluru
19/07/2025


Provided by

ಚಿಕ್ಕಮಗಳೂರು:   ಕಾಫಿನಾಡಲ್ಲಿ ಮಳೆ ಅಬ್ಬರ ಮುಂದುವರೆಯಲಿರೋ ಸಾಧ್ಯತೆ ಇದೆ. ಐದು ದಿನಗಳ ಕಾಲ ಹವಾಮಾನ ಇಲಾಖೆ ಮಳೆ ಎಚ್ಚರಿಕೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತದಿಂದ ಎಚ್ಚರಿಕೆ ನೀಡಿದೆ.

ವಿಕ್ ಎಂಡ್ ನಲ್ಲಿ ಬರೋ ಪ್ರವಾಸಿಗರಿಗೆ ಎಚ್ಚರಿಕೆ ನೀಡಿರುವ ಜಿಲ್ಲಾಡಳಿತ, ಚಾರಣ ಮಾಡುವಾಗ ಎಚ್ಚರದಿಂದ ಇರಲು ಸೂಚನೆ ನೀಡಿದೆ.  ಐದು ದಿನ ಅರೆಂಜ್ ಅಲರ್ಟ್ ಹಿನ್ನೆಲೆ ಜಿಲ್ಲಾಡಳಿತದಿಂದ ಮಲೆನಾಡಿಗರಿಗೆ ಸೂಚನೆ ನೀಡಲಾಗಿದೆ.

ಚಾರಣ ಮಾಡುವಾಗ ಎಚ್ಚರದಿಂದ ಇರಬೇಕು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ. ಪಶ್ಚಿಮಘಟ್ಟ ಸಾಲಿನಲ್ಲಿ ಚಾರಣ ಮಾಡುವಾಗ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಲಾಗಿದೆ.

ಗುಡ್ಡ, ಧರೆ ಕುಸಿತದ ಸಂಭವವಿರೋದ್ರಿಂದ ಸಾರ್ವಜನಿಕರಿಗೂ ಜಿಲ್ಲಾಡಳಿತ ಎಚ್ಚರಿಕೆಯ  ಸೂಚನೆ ನೀಡಿದೆ.  ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ‌‌ ಸಾಧ್ಯತೆ ಇರೋದ್ರಿಂದ,  ನದಿ ಪಾತ್ರದ ಜನರಿಗೂ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ