ಬೈಕ್ ವಿಚಾರಕ್ಕೆ ತಂದೆ—ಮಗನ ನಡುವೆ ಗಲಾಟೆ: ಮಗನ ದಾರುಣ ಅಂತ್ಯ!

ಬೆಂಗಳೂರು: ತಂದೆಯೊಬ್ಬ ತನ್ನ ಮಗನನ್ನೇ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಂಜನ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ತಂದೆ ವೆಂಕಟೇಶ್ (57) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡಿದ್ದ ವೆಂಕಟೇಶ್ ಗೆ ಅಂಜನ್ ಕುಮಾರ್ ಹಾಗೂ ಮತ್ತೊಬ್ಬಳು ಪುತ್ರಿ ಇದ್ದಳು. ಮಗಳಿಗೆ ವೆಂಕಟೇಶ್ ದ್ವಿಚಕ್ರ ವಾಹನ ಕೊಡಿಸಿದ್ದ. ಭಾನುವಾರ ಸಂಜೆ ಬೈಕ್ ತೆಗೆದುಕೊಂಡು ಹೋಗಿದ್ದ ವೆಂಕಟೇಶ್ ಕುಡಿತದ ಮತ್ತಿನಲ್ಲಿ ಕೀ ಕಳೆದುಕೊಂಡು ಬೈಕ್ ಅಲ್ಲೇ ಬಿಟ್ಟು ಮನೆಗೆ ಬಂದಿದ್ದ ಎನ್ನಲಾಗಿದೆ.
ಈ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದಾಗ ಮಗ ಅಂಜನ್ ಹೆಲ್ಮೆಟ್ ನಿಂದ ತಂದೆಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಕೋಪಗೊಂಡ ವೆಂಕಟೇಶ್ ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಮಗನಿಗೆ ಇರಿದಿದ್ದು, ತೀವ್ರ ರಕ್ತ ಸ್ರಾವದಿಂದ ಅಂಜನ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth