ಪೊಲೀಸ್ ಜೊತೆ ಕಿರಿಕ್: ಅಪ್ಪನಿಗೆ ಕಾಲ್ ಮಾಡಿದ್ರೂ ಬಿಡಲಿಲ್ಲ ಪೊಲೀಸರು!

27/10/2023
ಬೆಂಗಳೂರು: ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪನ ಪುತ್ರ ಆಡಂ ಬಿದ್ದಪ್ಪ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದು,ಯಲಹಂಕ ಸಂಚಾರಿ ಪೊಲೀಸರ ಜೊತೆಗೂ ಆಡಂ ವಾಗ್ವಾದ ಮಾಡಿರುವ ಘಟನೆ ನಡೆದಿದೆ.
ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್, ಆಡಂ ಕುಡಿದ ಮತ್ತಿನಲ್ಲಿ ಪೊಲೀಸರು ಹಾಗೂ ವ್ಯಕ್ತಿಯೊಬ್ಬರ ಜೊತೆ ಗಲಾಟೆ ಮಾಡಿದ್ದಾನೆ. ನಾನು ಪ್ರಭಾವಿ ಆಗಿದ್ದೇನೆ ನನ್ನನ್ನೇ ಪ್ರಶ್ನೆ ಮಾಡುತ್ತೀರಾ ಎಂದು ಬೆದರಿಕೆ ಹಾಕಿದ್ದಾನೆ.
ಯಲಹಂಕ ಸಂಚಾರಿ ಪೊಲೀಸರು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ರಾಹುಲ್, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.