ಸೋದರ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಸೇನಾಧಿಕಾರಿ

ತಮಿಳುನಾಡಿನ ಮಧುರೈನಲ್ಲಿ ಭಾರತೀಯ ಸೇನೆಯ ಅಧಿಕಾರಿಯೋರ್ವರು ಅಪ್ರಾಪ್ತೆಯನ್ನು ಆಕೆಯ ಚಿಕ್ಕಮ್ಮ ಮತ್ತು ಚಿಕ್ಕಪ್ಪ ಲೈಂಗಿಕ ದೌರ್ಜನ್ಯ ನೀಡಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾದ ಮಗುವನ್ನು ಆಸ್ಪತ್ರೆಯ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಮಗುವಿನ ಮರಣೋತ್ತರ ಪರೀಕ್ಷೆಯಲ್ಲಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ದೃಢಪಡಿಸಿದ್ದು ಉಸಿರುಗಟ್ಟಿ ಸಾಯಿಸಿದ್ದು ದೃಢಪಟ್ಟಿದೆ.
ಪ್ರಕರಣದ ತನಿಖೆ ಮುಂದುವರೆದಂತೆ, ಮಗುವಿನ ಚಿಕ್ಕಪ್ಪ ಅವಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಕಂಡುಕೊಂಡರು.
ಆಕೆಯ ಚಿಕ್ಕಮ್ಮನಿಗೆ ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದಿತ್ತು. ಆದರೆ ಆಕೆ ಅದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಳು.
ಪೊಲೀಸರು ದಂಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth