ಸೇನಾ ವಾಹನದ ಮೇಲೆ ಭಯೋತ್ಪಾದಕರಿಂದ ದಾಳಿ: ಐವರು ಸೈನಿಕರು ಹುತಾತ್ಮ, ಓರ್ವ ಯೋಧನ ಸ್ಥಿತಿ ಗಂಭೀರ

ಶ್ರೀನಗರ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್ ನ ಪೂಂಚ್ ನಲ್ಲಿ ಗುರುವಾರ ಸೇನಾ ವಾಹನದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ನೇಮಕವಾಗಿದ್ದ ರಾಷ್ಟ್ರೀಯ ರೈಫಲ್ ಯುನಿಟ್ ನ ಐವರು ಯೋಧರು ಹುತಾತ್ಮರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಯೋಧನನ್ನು ರಜೌರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ತೆರಳಿರುವ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಯೋತ್ಪಾದಕರು ಗ್ರೆನೇಡ್ ಗಳನ್ನು ಬಳಸಿದ್ದರಿಂದ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದಾಗಿ ಅವರು ಹೇಳಿದರು.
ಭಿಂಬರ್ ಗಲಿ ಪ್ರದೇಶದ ಬಳಿ ಮಧ್ಯಾಹ್ನ 3 ಗಂಟೆಗೆ ಭಯೋತ್ಪಾದಕರು ವಾಹನದ ಮೇಲೆ ಗುಂಡು ಹಾರಿಸಿದ್ದಾರೆ ಮತ್ತು ನಂತರ ಗ್ರೆನೇಡ್ ದಾಳಿಯ ಸಾಧ್ಯತೆಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಸೇನೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw