ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಆರೋಪಿಗಳ ಬಂಧನ - Mahanayaka

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಆರೋಪಿಗಳ ಬಂಧನ

dragess
16/08/2023


Provided by

‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ 4 ಆರೋಪಿಗಳನ್ನು ದಸ್ತಗಿರಿ ಮಾಡಿ ಒಟ್ಟು 200 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುತ್ತಾರೆ.

ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರದ ಉತ್ತರ ಠಾಣಾ ವ್ಯಾಪ್ತಿಯ ಫಳ್ನೀರ್ ಪರಿಸರದಲ್ಲಿ KA-19-MG-2744 ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮೂವರು ವ್ಯಕ್ತಿಗಳು ಸೇರಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಮೊಹಮ್ಮದ್ ಹನೀಫ್ ಎ.ಎನ್(47), ಸೈಯದ್ ಫೌಜಾನ್(30), ಸಿರಾಜುದ್ದೀನ್ ಅಬ್ಬೂಬಕ್ಕರ್(35) ಎಂಬುವವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ಒಟ್ಟು 100 ಗ್ರಾಂ ತೂಕದ ರೂ. 5,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು ರೂ. 4000/- ಮಾರುತಿ ಸ್ವಿಫ್ಟ್ ಕಾರು-1, ಮೊಬೈಲ್ ಫೋನುಗಳು-3, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 10,94,500/-ಆಗಬಹುದು. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ಸುದ್ದಿ