7:12 AM Saturday 25 - October 2025

ಪುತ್ತೂರು: ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಜಪಾನ್ ಮೂಲದ ವ್ಯಕ್ತಿಯ ಬಂಧನ

suoshi
24/07/2023

ಸಂಶಯಾಸ್ಪದ ರೀತಿಯಲ್ಲಿ ಓಡಾಡಿಕೊಂಡಿದ್ದ ಜಪಾನ್‌ ಮೂಲದ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಗಡಿಯಾರ ಎಂಬಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಜಪಾನ್ ಮೂಲದ ಸುಯೋಷಿ ಎಂದು ಗುರುತು ಪತ್ತೆ ಹಚ್ಚಲಾಗಿದೆ.

ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿಸಿಟಿಂಗ್ ವೀಸಾ ಮೂಲಕ ಭಾರತಕ್ಕೆ ಬಂದಿರುವ ವ್ಯಕ್ತಿ ಈತನಾಗಿದ್ದು, ಬೆಂಗಳೂರಿನಿಂದ ನಡೆದುಕೊಂಡು ಬಂದಿರುವ ಬಗ್ಗೆ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

ಇದೀಗ ನಗರ ಪೊಲೀಸರು ಎಮಿಗ್ರೀಷನ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಈತನ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version