ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯ ಬಂಧನ - Mahanayaka

ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯ ಬಂಧನ

abdul aziz
21/10/2023


Provided by

ಮಂಗಳೂರು :ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು  ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೋರ್ವನು ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ  MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ  ಅಬ್ದುಲ್ ಅಜೀಜ್ @ ಪೋಕರ್ ಅಜೀಜ್(42)

ಎಂಬುವವರನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ