ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನ: 50 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶ

ಬೆಂಗಳೂರಿನ ಗಿರಿನಗರ ಪೊಲೀಸರಿಂದ ಅಂತರಾಜ್ಯ ಗಾಂಜಾ ಮಾರಾಟಗಾರರ ಬಂಧನವಾಗಿದ್ದು ಸುಮಾರು 95 ಕೆ.ಜಿ. 400 ಗ್ರಾಂ ತೂಕದ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಕಳೆದ ಜೂನ್ 22 ರಂದು ಗಿರಿನಗರ ಪೊಲೀಸ್ ಠಾಣೆಯ ಎನ್.ಡಿ.ಪಿ.ಎಸ್ ಕಾಯ್ದೆ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಆರೋಪಿ ನೀಡಿದ ಮಾಹಿತಿ ಮೇರೆಗೆ ಮಾದಕವಸ್ತು ಗಾಂಜಾವನ್ನು ಮಹಾರಾಷ್ಟ್ರ ರಾಜ್ಯದಿಂದ ಸರಬರಾಜಾಗಿರುವ ಬಗ್ಗೆ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿದ್ದರು.
ಬಳಿಕ ತನಿಖೆಯನ್ನು ಮುಂದುವರೆಸಿದ ತನಿಖಾಧಿಕಾರಿಯು ಸಿಬ್ಬಂದಿಯೊಂದಿಗೆ ಮಹಾರಾಷ್ಟ್ರ ರಾಜ್ಯಕ್ಕೆ ತೆರಳಿ 4 ಜನ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳು, ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಚ್ಚಿಟ್ಟಿರುವ ಸುಮಾರು 50 ಲಕ್ಷ ರೂ ಬೆಲೆಬಾಳುವ ಒಟ್ಟು 95 ಕೆ.ಜಿ 400 ಗ್ರಾಂ ಮಾಧಕವಸ್ತು ಗಾಂಜಾವನ್ನು ಅಮಾನತ್ತು ಮಾಡಿದ್ದಾರೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗ ಉಪ ಪೊಲೀಸ್ ಆಯುಕ್ತ ಪಿ. ಕೃಷ್ಣಕಾಂತ್ ಮಾರ್ಗದರ್ಶನದಲ್ಲಿ ವಿವಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಟಿ. ನಾಗರಾಜ್ ನೇತೃತ್ವ ವಹಿಸಿದ್ದರು. ಗಿರಿನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಶ ಸಂದೀಪ್ ಕುಮಾರ್ ಹಾಗೂ ಸಿಬ್ಬಂದಿರವರ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw