ಸೆಕ್ಯುರಿಟಿ ಗಾರ್ಡ್ ಗಳನ್ನು ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್ ಬಂಧನ
ಬೆಂಗಳೂರು: ಒಂಟಿ ಸೆಕ್ಯುರಿಟಿ ಗಾರ್ಡ್ ಗಳನ್ನು ಹುಡುಕಿ ಕೊಲೆ ಮಾಡುತ್ತಿದ್ದ ಸೈಕೋ ಕಿಲ್ಲರ್ನನ್ನು ಆರ್. ಟಿ ನಗರ ಪೊಲೀಸರು ಬಂಧಿಸಿದ್ದಾರೆ. ತೌಸೀಪ್ ಕೊಲೆ ಆರೋಪಿ. ಆರೋಪಿ ತೌಸೀಪ್ ವಿಚಿತ್ರ ಸೈಕೋಪಾತ್ ಆಗಿದ್ದು ಹಲವು ಪೋಲಿಸ್ ಠಾಣೆಗಳಿಗೆ ಬೇಕಾಗಿದ್ದನು.
ಮಧ್ಯರಾತ್ರಿ ಕಂಠಪೂರ್ತಿ ಕುಡಿದು, ಮಾದಕ ವಸ್ತುಗಳಿಂದ ನಶೆ ಏರಿಸಿಕೊಂಡು ಬರುವ ಈತ ನಸುಕಿನ ಜಾವ ಎರಡಿಂದ ಮೂರು ಗಂಟೆ ಅವಧಿಯಲ್ಲಿ ಒಂಟಿ ಸೆಕ್ಯುರಿಟಿ ಗಾರ್ಡ್ಗಳನ್ನು ಹುಡುಕಿ ಕೊಲ್ಲುತ್ತಿದ್ದನು.
ಸೊಲ್ಯುಶನ್ ಹಾಗೂ ಡ್ಯಾಗರ್ ಅನ್ನು ಜೇಬಿನಲ್ಲಿ ಇಟ್ಟುಕೊಂಡು ತಿರುಗುತ್ತಿದ್ದನು. ಹಲವು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ದೂರು ದಾಖಲಾಗಿದ್ದವು. ಈ ಹಿನ್ನೆಲೆ ಮೂರು ದಿನಗಳ ಕಾಲ ಹಗಲು ರಾತ್ರಿ ಪೊಲೀಸರು ಈತನ ಹಿಂದೆ ಬಿದ್ದಿದ್ದರು. ಕೊನೆಗೆ ಆರ್.ಟಿ ನಗರ 80 FT ರೋಡ್ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
ಈತ ಈಗಾಗಲೇ ಆರ್.ಟಿ ನಗರ, ಸಂಜಯ ನಗರ, ಜೆಸಿ ನಗರ, ಕೆಜಿ ಹಳ್ಳಿಯಲ್ಲಿ ಸೆಕ್ಯುರಿಟಿ ಗಾರ್ಡ್ಗಳನ್ನು ಕೊಲೆ ಮಾಡಿದ್ದಾನೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಮನೆ ಬಳಿಯೂ ಸೆಕ್ಯುರಿಟಿಗೆ ಚಾಕುವಿನಿಂದ ಕೊಲೆಗೈದಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























