ಐಶಾರಾಮಿ ಜೀವನಕ್ಕಾಗಿ ನಿಷೇಧಿತ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯ ಬಂಧನ
ಬೆಂಗಳೂರು: ಐಶಾರಾಮಿ ಜೀವನಕ್ಕಾಗಿ ನಿಷೇಧಿತ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯಿಂದ ಸುಮಾರು 20.00 ಲಕ್ಷ ರೂ ಮೌಲ್ಯದ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯುವಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಬಸವನಗುಡಿ ಠಾಣಾ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಬಸವನಗುಡಿ ಪೊಲೀಸರು ಕೇರಳ ಮೂಲದ ಆರೋಪಿಯೊಬ್ಬನನ್ನು ಬಂಧಿಸಿ, ಆತನಿಂದ ನಿಷೇಧಿತ ಮಾದಕ ವಸ್ತು 200 ಗ್ರಾಂ, MDMA ಮತ್ತು ಕೃತ್ಯ ಉಪಯೋಗಿಸಿದ್ದ ವೆಸ್ಟಾ ದ್ವಿ ಚಕ್ರವಾಹನ, ಮೊಬೈಲ್ ಫೋನ್ ಮತ್ತು ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಇದರ ಒಟ್ಟು ಮೌಲ್ಯ ಸುಮಾರು 20 ಲಕ್ಷ ರೂಪಾಯಿಯಾಗಿರುತ್ತದೆ.ಬೆಂಗಳೂರು ನಗರ, ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಪಿ.ಕೃಷ್ಣಕಾಂತ್, ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ.ವಿ.ಶ್ರೀನಿವಾಸ್ ರವರ ಮಾರ್ಗದರ್ಶನದಲ್ಲಿ ಬಸವನಗುಡಿ ಸಿಬ್ಬಂದಿ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























