ವೇಶ್ಯಾವಾಟಿಕೆ ಮೂಲಕ ಹಣಗಳಿಸುತ್ತಿದ್ದ ಆರೋಪಿಗಳ ಬಂಧನ - Mahanayaka

ವೇಶ್ಯಾವಾಟಿಕೆ ಮೂಲಕ ಹಣಗಳಿಸುತ್ತಿದ್ದ ಆರೋಪಿಗಳ ಬಂಧನ

govinda rajanagara
02/07/2023


Provided by

ಬೆಂಗಳೂರು: ಪಶ್ಚಿಮ ವಿಭಾಗದ ವಿಜಯನಗರ ವ್ಯಾಪ್ತಿಗೊಳಪಟ್ಟ ಗೋವಿಂದರಾಜನಗರ ಪೊಲೀಸರು ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಗೋವಿಂದರಾಜನಗರ ಪೊಲೀಸ್ ಠಾಣಾ ಸರಹದ್ದಿಗೆ ಸೇರಿದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿಯಾಧಾರದ ಮೇಲೆ ಗೋವಿಂದರಾಜನಗರ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ದಾಳಿ ಮಾಡಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಮಹಿಳೆ ಮತ್ತು ಒಬ್ಬ ಪುರುಷ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಎರಡು ಮೊಬೈಲ್ ಫೋನ್‌ ಗಳು, ರೂ.2,500 ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ