ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ನಾಲ್ಕನೇ ಆರೋಪಿ ಸಹಿತ ಮೂವರ ಬಂಧನ
	
	
	
	
	
ಹಾಸನ: ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆ ಮೆರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಬಂಧಿತ ಆರೋಪಿಗಳಾಗಿದ್ದು, ಎನ್ ಐಎ ಅಧಿಕಾರಿಗಳ ತಂಡ ಆರೋಪಿಗಳನ್ನು ಸಕಲೇಶಪುರ ತಾಲೂಕಿನ ಆನೆಮಹಲ್ ನಲ್ಲಿ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಪ್ರಕರಣದ 4ನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್ ನ ಸಿರಾಜ್ ನ ಕೆಲಸಕ್ಕೆ ಸೇರಿಕೊಂಡಿದ್ದರು. ಹೀಗಾಗಿ ಆರೋಪಿಗೆ ಆಶ್ರಯ ನೀಡಿದ ಆರೋಪದಲ್ಲಿ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಎನ್ ಐಎ ಇನ್ಸ್ ಪೆಕ್ಟರ್ ಷಣ್ಮುಗಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿಗಳನ್ನು ಬೆಂಗಳೂರು ಎನ್ ಐಎ ಕಚೇರಿಯತ್ತ ಕರೆದೊಯ್ಯಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯಾಗಿದ್ದ ಮುಸ್ತಫಾ ತಲೆ ಮರೆಸಿಕೊಂಡಿದ್ದ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್ ಐಎ ಅಧಿಕಾರಿಗಳು ಘೋಷಿಸಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97

























