9:28 PM Tuesday 18 - November 2025

ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದಇಬ್ಬರು ಕುಖ್ಯಾತ ಆರೋಪಿಗಳ ಬಂಧನ

arest
27/06/2023

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ.

ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಮುಹಮ್ಮದ್ ಫೈಝಲ್ ಯಾನೆ ಶಾಕಿರ್ ಯಾನೆ ಫೈಜು ಬಂಧಿತ ಆರೋಪಿಗಳು. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೋಲಿಸ್ ಕಮೀಶನರ್ ಕುಲದೀಪ್ ಕುಮಾರ್ ಆರ್ ಜೈನ್, ಬಂಧಿತರಿಂದ 12,48,550 ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 1,34,000 ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಆರೋಪಿಗಳ ಬಂಧನೊಂದಿಗೆ ಎರಡು ಜಿಲ್ಲೆಗಳಲ್ಲಿ ನಡೆದಿರುವ ಸರಗಳ್ಳತನ ಮತ್ತು ಮತ್ತು ದ್ವಿಚಕ್ರ ವಾಹನಗಳ ಕಳ್ಳತನ ಸೇರಿದಂತೆ 13 ಪ್ರಕರಣಗಳು ಪತ್ತೆಯಾಗಿವೆ. ಆರೋಪಿ ಹಬೀಬ್ ಹಸನ್ ಎಂಬಾತನು ಈ ಹಿಂದೆ ಎರಡೂ ಜಿಲ್ಲೆಗಳ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ 35ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಇನ್ನೊಬ್ಬ ಆರೋಪಿ ಮಹಮ್ಮದ್ ಫೈಜಲ್ 15 ಪ್ರಕರಣಗಳಲ್ಲಿ ಆರೋಪ ಎದುರಿಸುತ್ತಿದ್ದ. ಈತ ಪ್ರಕರಣವೊಂದರಲ್ಲಿ ಜೈಲು ಸಜೆ ಅನುಭವಿಸಿ ಎಪ್ರಿಲ್ ನಲ್ಲಿ ಜೈಲಿನಿಂದ ಹೊರಬಂದಿದ್ದ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version