12:27 PM Wednesday 20 - August 2025

ಯುಎಪಿಎ ಕಾಯ್ದೆಯಡಿ ಶರಣ್ ಪಂಪ್ ‌‌ವೆಲ್ ನ್ನು ಬಂಧಿಸಿ: ಕಾಂಗ್ರೆಸ್

sharan pumpwell
30/01/2023

ಮಂಗಳೂರಲ್ಲಿ ಫಾಝಿಲ್‌ ನನ್ನು ನಾವೇ ಹತ್ಯೆ ಮಾಡಿರುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ‌‌ವೆಲ್ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ.

ಸುರತ್ಕಲ್‌ನಲ್ಲಿ ಫಾಝಿಲ್ ಹತ್ಯೆ ಆದಾಗ ಆರೋಪಿಗಳ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಪಕ್ಷವು ನಿರಂತರವಾಗಿ ಹೋರಾಟ ನಡೆಸಿತ್ತು. ಆದರೆ ಪೊಲೀಸರು ಕಾಟಾಚಾರಕ್ಕೆ ತನಿಖೆ ನಡೆದಿದೆ. ಕೆಲವು ಆರೋಪಿಗಳನ್ನು ಬಂಧಿಸಿತ್ತು ಎಂದು ಅವರು ಆರೋಪಿಸಿದರು.

ಪೊಲೀಸರ ನಿರ್ಲಕ್ಷ್ಯದಿಂದ ನೈಜ ಆರೋಪಿಗಳ ಮುಖ ಅನಾವರಣ ಆಗಲೇ ಇಲ್ಲ.ಇದೀಗ ಶರಣ್ ಪಂಪ್ ವೆಲ್ ಬಹಿರಂಗವಾಗಿ ಫಾಝಿಲ್ ‌ನನ್ನು ನಾವೇ ಹತ್ಯೆ ಮಾಡಿಸಿದ್ದು ಎಂದ ಕಾರಣ ಪೊಲೀಸರು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೆ.ಕೆ.ಶಾಹುಲ್ ಹಮೀದ್ ಆಗ್ರಹಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version