ಬಿ.ಎಸ್.ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ! - Mahanayaka
6:43 PM Wednesday 17 - December 2025

ಬಿ.ಎಸ್.ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರಂಟ್ ಜಾರಿ!

yediyurappa
13/06/2024

ಬೆಂಗಳೂರು: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ.

ವಿಚಾರಣೆಗೆ ಬಿ.ಎಸ್​.ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ(ಜೂ.12) ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ವಾರಂಟ್​ ಜಾರಿ ಮಾಡಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಗಂಭೀರ ಸ್ವರೂಪ ಪಡೆದಿದ್ದು, ಈ ಪ್ರಕರಣ ಸಂಬಂಧ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಿಂದ NBW ಜಾರಿಯಾಗಿದೆ. ಬಿಎಸ್‌ ವೈ ಬಂಧನಕ್ಕಾಗಿ ವಾರಂಟ್ ನೀಡುವಂತೆ ಸಿಐಡಿ ಕೋರಿತ್ತು.

ಇದೀಗ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಬಂಧನಕ್ಕಾಗಿ ಸಿಐಡಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ