ಬಂಧಿತ ಆರೋಪಿಗಳನ್ನು ಈಗಲೇ “ಉಗ್ರರು” ಎಂದು ಹೇಳಲು ಸಾಧ್ಯವಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ - Mahanayaka

ಬಂಧಿತ ಆರೋಪಿಗಳನ್ನು ಈಗಲೇ “ಉಗ್ರರು” ಎಂದು ಹೇಳಲು ಸಾಧ್ಯವಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

dr g parameshwar
19/07/2023


Provided by

ಬೆಂಗಳೂರು: ನಗರದಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿರುವ ಆರೋಪದಲ್ಲಿ ಬಂಧಿತರಾಗಿರುವ ಆರೋಪಿಗಳನ್ನು ಈಗಲೇ ಉಗ್ರರು ಎಂದು ಹೇಳಲು ಸಾಧ್ಯವಿಲ್ಲ, ಅವರಿಗೆ ಟೆರರ್ ಲಿಂಕ್ ಇದೆಯಾ ಅಂತ ನೋಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನ ಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರನ್ನು ವಿಚಾರಣೆ ಮಾಡಿ ಟೆರರ್ ಲಿಂಕ್ ಇದೆಯಾ ಅಂತ ನೋಡುತ್ತಿದ್ದಾರೆ, ಕೇಂದ್ರ ಕಾರಾಗೃಹ ಕನೆಕ್ಷನ್ ಇಟ್ಟುಕೊಂಡಿರುವುದು ತಿಳಿದು ಬಂದಿದೆ ಎಂದರು.

ಕೆಲವು ಕೃತ್ಯ ಎಸಗುವ ಬಗ್ಗೆ ಮಾಹಿತಿ ಸಿಕ್ಕಿದೆ. ತನಿಖೆಯಾಗಲಿ, ಆಮೇಲೆ ಎನ್ ಐಎ ತನಿಖೆ ಬಗ್ಗೆ ನೋಡೋಣ, ಸದ್ಯ ಬಂಧಿತರಿಂದ 7 ಕಂಟ್ರಿಮೇಡ್ ಪಿಸ್ತೂಲ್, ವಾಕಿಟಾಕಿ ಆಯುಧ ಸಿಕ್ಕಿದೆ ಎಂದರು.

ಕೆಲವರು ಬೇಲ್ ಮೇಲೆ ಬಿಡುಗಡೆಯಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವರು ಕೊಲೆ, ದರೋಡೆ ಸೇರಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಯಾವ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂಬ ಬಗ್ಗೆ ತನಿಖೆ ತಿಳಿಯಬೇಕಿದೆ ಎಂದು ಪರಮೇಶ್ವರ್ ತಿಳಿಸಿದ್ರು…

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿhttps://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿhttps://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ