ರಸ್ತೆ ಬದಿ ಮಹಿಳೆಯನ್ನು ಎಳೆದಾಡಿ ಚುಂಬಿಸಿದ ಕಾಮುಕ ಅರೆಸ್ಟ್

ಬೆಂಗಳೂರು: ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ಎಳೆದಾಡಿ, ಚುಂಬಿಸಿ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
ಸುರೇಶ್(25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕ್ಯಾಬ್ ಚಾಲಕ ಎಂದು ತಿಳಿದು ಬಂದಿದೆ. ಆಗಸ್ಟ್ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್ಗೆ ವಾಕಿಂಗ್ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಆರೋಪಿ ಪರಾರಿಯಾಗಿದ್ದ.
ಈ ಘಟನೆಯಿಂದ ಭಯಗೊಂಡು ಮುಜುಗರಕ್ಕೊಳಗಾಗಿದ್ದ ಮಹಿಳೆ ವಾಕಿಂಗ್ ಗೆ ತೆರಳದೆ ಮನೆಗೆ ತೆರಳಿದ್ದರು.ಅಲ್ಲದೇ ಪೊಲೀಸರಿಗೆ ದೂರು ನೀಡಲು ಸಹ ಹಿಂಜರಿದಿದ್ದರು ಎನ್ನಲಾಗಿದೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕೋಣನಕುಂಟೆ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡು ಆರೋಪಿಗೆ ಶೋಧ ನಡೆಸಿದ್ದು, ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ಮೂವರು ಪೊಲೀಸರು ಸಸ್ಪೆಂಡ್:
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳದೇ ನಿರ್ಲಕ್ಷ್ಯ ವಹಿಸಲಾಗಿರುವ ಆರೋಪದ ಹಿನ್ನೆಲೆ ಕೋಣನಕುಂಟೆ ಠಾಣೆಯ ಮೂವರು ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth