11:06 AM Saturday 23 - August 2025

ಬೆಳ್ತಂಗಡಿ: ಕೃಷಿಕ ಹಾಗೂ ಕಲಾವಿದ ರಘುರಾಮ್ ಶೆಟ್ಟಿ ಹೃದಯಾಘಾತದಿಂದ ನಿಧನ

raghuram shetty
03/12/2022

ಬೆಳ್ತಂಗಡಿ : ಚಲನಚಿತ್ರ ಧಾರವಾಹಿಗಳಲ್ಲಿ ನಟಿಸಿದ್ದ ಕಲಾವಿದ ಹಾಗೂ ಕೃಷಿಕರಾಗಿರುವ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ದಂಪದಡ್ಕ ನಿವಾಸಿ ರಘುರಾಮ್ ಶೆಟ್ಟಿ(58) ಡಿ.2 ರಂದು ರಾತ್ರಿ ಮನೆಯಲ್ಲಿ ಹೃದಯಾಘಾತವಾಗಿದ್ದು, ತಕ್ಷಣ ಮನೆಮಂದಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ.

ಡಿ.2 ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ ಮನೆಯಲ್ಲಿ ಊಟ ಮಾಡಿ ನಂತರ ನೀರು ಕುಡಿಯಲು ಹೋದಾಗ ಏಕಾಏಕಿ ನೆಲಕ್ಕೆ ಬಿದ್ದಿದ್ದು ತಕ್ಷಣ ಮನೆಯವರು ಆಸ್ಪತ್ರೆಗೆ ದಾಖಲಿಸಿದಾಗ ಹೃದಯಾಘಾತದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕನ್ನಡ , ತುಳು ಧಾರವಾಹಿ ಮತ್ತು ಚಲನಚಿತ್ರಗಳಲ್ಲಿ ನಟಿಸಿರುವ ರಾಘುರಾಮ್ ಶೆಟ್ಟಿಯವರು ಮನೆಯಲ್ಲಿ ಕೃಷಿಕರಾಗಿದ್ದರು ಇವರಿಗೆ ಪತ್ನಿ ಹಾಗೂ ಒಬ್ಬ ಪುತ್ರ ಇದ್ದು ಪುತ್ರ ವಿದ್ಯಾಭ್ಯಾಸ ಮಾಡುತ್ತಿದ್ದಾನೆ‌‌‌.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version