ಕೊನೆಗೂ ದಿಲ್ಲಿ ಸಿಎಂಗೆ ಸಿಕ್ತು ರಿಲೀಫ್: ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು

10/05/2024

ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಗೆ ಇಂದು ಸುಪ್ರೀಂ ಕೋರ್ಟ್ ಜೂನ್ 1ರ ತನಕ ಮಧ್ಯಂತರ ಜಾಮೀನು ಮಂಜೂರುಗೊಳಿಸಿದೆ. ಅಂತಿಮ ಹಂತದ ಮತದಾನ ನಡೆಯುವ ತನಕ ಅವರಿಗೆ ಮಧ್ಯಂತರ ಜಾಮೀನು ದೊರಕಿದ್ದು ಜೂನ್ 2ರಂದು ಜೈಲಿಗೆ ವಾಪಸಾಗಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಮಾರ್ಚ್ ೨೧ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ರನ್ನು ಬಂಧಿಸಿತ್ತು.

ತಮ್ಮ ಬಂಧನವನ್ನು ಪ್ರಶ್ನಿಸಿ ಹಾಗೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡಲು ಅನುವು ಮಾಡಿಕೊಡಲು ಜಾಮೀನು ಒದಗಿಸಬೇಕೆಂಬ ಕೇಜ್ರಿವಾಲ್ ರ ಅರ್ಜಿಗೆ ಜಾರಿ ನಿರ್ದೇಶನಾಲಯ ಆಕ್ಷೇಪಿಸಿತ್ತು.

ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ದೀಪಾಂಕರ್ ದತ್ತಾ ಅವರ ಪೀಠ ಇಂದು ಕೇಜ್ರಿವಾಲ್ ರಿಗೆ ಮಧ್ಯಂತರ ಜಾಮೀನು ನೀಡಲು ಒಪ್ಪಿದೆ. ಜೂನ್ ೨ರಂದು ಶರಣಾಗಬೇಕೆಂದು ನ್ಯಾಯಾಲಯ ಸೂಚಿಸಿದೆ.
ಕೇಜ್ರಿವಾಲ್ ರಿಗೆ ಜೂನ್ ೫ರ ತನಕ ಮಧ್ಯಂತರ ಜಾಮೀನು ದೊರಕಬಹುದೇ ಎಂದು ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಳಿದಾಗ ಜಸ್ಟಿಸ್ ಖನ್ನಾ ನಕಾರಾತ್ಮಕವಾಗಿ ಸ್ಪಂದಿಸಿದರು.

ಈಡಿ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಬಿಡುಗಡೆ ನಂತರ ಕೇಜ್ರಿವಾಲ್ ಪ್ರಕರಣದ ಬಗ್ಗೆ ಮಾತನಾಡಕೂಡದು ಎಂದು ಹೇಳಿದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version