ಹರ್ಯಾಣದಲ್ಲಿ ಅರಳಿದ ಕಮಲ: ‘ದೊಡ್ಡ ಪಾಠ’ ಎಂದ ಕೇಜ್ರಿವಾಲ್
ಹರ್ಯಾಣದಲ್ಲಿ ಆಡಳಿತರೂಢ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದು, ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಈ ಚುನಾವಣೆ ಫಲಿತಾಂಶ “ದೊಡ್ಡ ಪಾಠ” ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಯಾರೊಬ್ಬರೂ ಯಾವತ್ತೂ ಅತಿಯಾದ ಆತ್ಮವಿಶ್ವಾಸವನ್ನು ಹೊಂದಿರಬಾರದು ಎಂಬುದಕ್ಕೆ ಹರಿಯಾಣದ ಫಲಿತಾಂಶ ದೊಡ್ಡ ಪಾಠ” ಎಂದು ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಪರೋಕ್ಷವಾಗಿ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಎಎಪಿ ಪುರಸಭೆ ಕೌನ್ಸಿಲರ್‌ಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಯಾವುದೇ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಪ್ರತಿ ಚುನಾವಣೆ ಮತ್ತು ಪ್ರತಿ ಸ್ಥಾನವು ಕಠಿಣವಾಗಿರುತ್ತದೆ” ಎಂದು ಹೇಳಿದರು.
ಎಎಪಿಯು ಸ್ಪರ್ಧಿಸಲಿರುವ ಸ್ಥಾನಗಳ ಸಂಖ್ಯೆಯ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. 9 ಸ್ಥಾನಗಳನ್ನು ನೀಡಬೇಕೆಂಬ ಎಎಪಿ ಬೇಡಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿದ ನಂತರ ರಾಜ್ಯದ ಒಟ್ಟು 90 ಸ್ಥಾನಗಳಲ್ಲಿ 89 ರಲ್ಲಿ ಆಪ್ ಸ್ವತಂತ್ರವಾಗಿ ಸ್ಪರ್ಧಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth