ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ವಿಚಾರ: ಉಡುಪಿಗೆ ಆಗಮಿಸಿದ ಖುಷ್ಬೂ ಸುಂದರ್ ಹೇಳಿದಿಷ್ಟು…!

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದರು.
ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೆಡಿಕಲ್ ಸ್ಟೂಡೆಂಟ್ ಗೆ ಆದ ಸಮಸ್ಯೆ ವಿಚಾರಣೆಗೆ ಬಂದಿದ್ದೇನೆ. ನಾನು ಮೊದಲು ಪೊಲೀಸರನ್ನು ಭೇಟಿಯಾಗಿ ಮಾಹಿತಿ ಪಡೆದುಕೊಳ್ಳುತ್ತೇನೆ, ಕಾಲೇಜ್ ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ಮಾಡುತ್ತೇನೆ. ಎಲ್ಲರ ಜೊತೆ ಮಾತನಾಡಿದ ನಂತರ ನಾನು ಮಾಧ್ಯಮಗಳಿಗೆ ವಿವರಿಸುತ್ತೇನೆ ಎಂದು ತಿಳಿಸಿದ್ರು.
ಪ್ರಕರಣವನ್ನು ಸಂಪೂರ್ಣವಾಗಿ ನಾನು ಮೊದಲು ಆರಿತುಕೊಳ್ಳಬೇಕಾಗಿದೆ. ಒಟ್ಟು ಎರಡು ದಿನ ನಾನು ಇಲ್ಲಿ ಇರುತ್ತೇನೆ. ಕಾಲೇಜಿಗೆ ಭೇಟಿ ಕೊಡುತ್ತೇನೆ ಸಂತ್ರಸ್ತೆ, ವಿದ್ಯಾರ್ಥಿಗಳ ಜೊತೆ ಮಾತನಾಡುತ್ತೇನೆ, ಕಾಲೇಜಿನ ಆಡಳಿತ ಮಂಡಳಿ ಜೊತೆ ಕೂಡಾ ಮಾತನಾಡುತ್ತೇನೆ ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw