ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಪ್  ರೂಮ್ ನಲ್ಲಿ ಹಿಗ್ಗಾಮುಗ್ಗಾ ಥಳಿತ! - Mahanayaka
11:06 AM Saturday 23 - August 2025

ಅಸಭ್ಯ ವರ್ತನೆ: ಉಪನ್ಯಾಸಕನಿಗೆ ಸ್ಟಾಪ್  ರೂಮ್ ನಲ್ಲಿ ಹಿಗ್ಗಾಮುಗ್ಗಾ ಥಳಿತ!

upanyasaka
16/04/2022


Provided by

ಬೆಳಗಾವಿ: ಕಾಲೇಜಿನ ಅತಿಥಿ ಉಪನ್ಯಾಸಕರ ಜೊತೆಗೆ ಅಸಭ್ಯ ವರ್ತನೆ ತೋರಿದ ಉಪನ್ಯಾಸಕನಿಗೆ ಅತಿಥಿ ಉಪನ್ಯಾಸಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ  ಏಪ್ರಿಲ್ 12ರಂದು  ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಥಳಿತಕ್ಕೊಳಗಾದ ಉಪನ್ಯಾಸಕನಾಗಿದ್ದಾನೆ ಎಂದು ವರದಿಯಾಗಿದೆ.

ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಬರುತ್ತಿದ್ದ ಉಪನ್ಯಾಸಕ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಅಸಭ್ಯವಾಗಿ ವರ್ತಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಉಪನ್ಯಾಸಕನ ವರ್ತನೆಯ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಂಡಿರಲಿಲ್ಲ. ಆತನ ವರ್ತನೆ ಮಿತಿ ಮೀರಿದಾಗ ನಾವೇ ಥಳಿಸಿದ್ದೇವೆ ಎಂದು ಉಪನ್ಯಾಸಕಿಯರು ಹೇಳಿದ್ದಾರೆ ಎನ್ನಲಾಗಿದೆ.

ಇನ್ನೂ ಘಟನೆ ಸಂಬಂಧ ಉಪನ್ಯಾಸಕನ ವಿರುದ್ಧ ಬೆಳಗಾವಿಯ ಮಹಿಳಾ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಸ್ಸಿ-ಎಸ್ಟಿ ಮಕ್ಕಳಿಗೆ ನೀಡುವ ಹಾಸಿಗೆ, ದಿಂಬುಗಳಲ್ಲಿಯೂ ಕಾಂಗ್ರೆಸ್ ಭ್ರಷ್ಟಾಚಾರ ಮಾಡಿದೆ | ಬೊಮ್ಮಾಯಿ ವಾಗ್ದಾಳಿ

ಊಟವಾದ ತಕ್ಷಣ ಕೋಲ್ಡ್ ವಾಟರ್ ಕುಡಿಯ ಬಾರದು ಯಾಕೆ ಗೊತ್ತಾ?

ತಂದೆ ಹಾವನ್ನು ಹೊಡೆದು ಕೊಂದ ಕೆಲವೇ ಗಂಟೆಗಳಲ್ಲಿ ಪುತ್ರನನ್ನು ಕಚ್ಚಿ ಕೊಂದ ಇನ್ನೊಂದು ಹಾವು

ಮಂಗಳೂರು: ABVP ಕಾನೂನು ವಿದ್ಯಾರ್ಥಿಗಳ ರಾಜ್ಯ ಸಮ್ಮೇಳನ

ಇತ್ತೀಚಿನ ಸುದ್ದಿ