ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲು!

ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ವಿರುದ್ಧ ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ, ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿರುವ ಆರೋಪ ಕೇಳಿ ಬಂದಿದ್ದು, ದೂರು ದಾಖಲಾಗಿದೆ.
ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬುವರು ದೂರು ನೀಡಿದ್ದಾರೆ. ದೂರಿನ ಮೇರೆಗೆ ವರ್ತೂರು ಸಂತೋಷ್ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಕೂಡ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಹಳ್ಳಿಕಾರ್ ರೇಸ್ ಗೆ ಸಿದ್ಧತೆ ನಡೆಸುತ್ತಿರುವ ವರ್ತೂರು ಸಂತೋಷ್ ಟ್ರಕ್ ಒಂದರಲ್ಲಿ 9 ಹೋರಿಗಳು ಹಾಗೂ ಕೆಲವು ವಸ್ತುಗಳನ್ನು ಸಾಗಿಸಿದ್ದಾರೆ. ಇದು ಪ್ರಾಣಿ ಸಾಗಾಟ ನಿಯಮಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.
ವರ್ತೂರು ಸಂತೋಷ್ ವಿರುದ್ಧ ದೂರು ನೀಡಿರುವ ಅಧಿಕಾರಿ ನ್ಯಾಯಾಲಯದ ಮೆಟ್ಟಿಲೇರಲು ಕೂಡ ಸಜ್ಜಾಗಿದ್ದಾರೆ ಎಂದು ಹೇಳಲಾಗಿದ್ದು, ಹಳ್ಳಿಕಾರ್ ರೇಸ್ ಮಾಡಲು ಸಜ್ಜಾಗಿದ್ದ ವರ್ತೂರು ಸಂತೋಷ್ ಗೆ ಸಂಕಷ್ಟ ಎದುರಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97