ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಆಶಾ ಕಾರ್ಯಕರ್ತೆ ಸಾವು!

ಹೆರಿಗೆ ವೇಳೆ ತೀವ್ರ ರಕ್ತಸ್ರಾವವಾಗಿ ಮಹಿಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ, ಆಶಾ ಕಾರ್ಯಕರ್ತೆ ಭವ್ಯ (28), ಮೃತಪಟ್ಟ ಮಹಿಳೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.
ಭವ್ಯ ಅವರಿಗೆ 3ನೇ ಹೆರಿಗೆಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಂಗಳವಾರ ರಾತ್ರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು.
ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw