ಸ್ವಪಕ್ಷದ ಶಾಸಕನ ವಿರುದ್ಧ ಅಶ್ವಥ್‌ ನಾರಾಯಣ್‌ ಕಿಡಿ - Mahanayaka

ಸ್ವಪಕ್ಷದ ಶಾಸಕನ ವಿರುದ್ಧ ಅಶ್ವಥ್‌ ನಾರಾಯಣ್‌ ಕಿಡಿ

ashwath narayan
28/04/2023


Provided by

ಬೆಂಗಳೂರು: ಬಿಜೆಪಿ-ಜೆಡಿಎಸ್‌ ಪಕ್ಷಗಳ ನಡುವೆ ಒಳ ಒಪ್ಪಂದ ಆಗಿದೆ ಎಂದು ಶಾಸಕ ಪ್ರೀತಂ ಗೌಡ ನೀಡಿದ್ದ ಹೇಳಿಕೆಗೆ ಸಚಿವ ಅಶ್ವಥ್‌ ನಾರಾಯಣ್‌ ವಿರೋಧ ವ್ಯಕ್ತಪಡಿಸಿ, ಪ್ರೀತಂ ಗೌಡರ ಹೇಳಿಕೆ ಖಂಡನೀಯ ಹಾಗೂ ಬೇಜವಾಬ್ದಾರಿಯಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಸಹ ಈ ತರಹದ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶ ರವಾನೆ ಮಾಡುತ್ತೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗ್ತಾರೆ.

ನಾವು ಮಾಡಿರೋ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ. ಕಾಂಗ್ರೆಸ್ ಪಕ್ಷದ ಶಕ್ತಿ ಎಲ್ಲಿದೆ ಎಂಬ ಬಗ್ಗೆ ಅಧ್ಯಕ್ಷರಿಗೆ ತಿಳುವಳಿಕೆ ಇಲ್ಲ. 21 ಶತಮಾನ ಜ್ಞಾನ ಆಧಾರಿತ ಶತಮಾನ ಅನ್ನೋದು ಗೊತ್ತಿಲ್ಲ. ಮಾಹಿತಿ ತಂತ್ರಜ್ಞಾನ, ಶಿಕ್ಷಣ, ಬ್ಯಾಂಕಿಂಗ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ