ಸಿಎಂ ಸಿದ್ದರಾಮಯ್ಯ ಸಿಟ್ಟಿಗೆ ಗುರಿಯಾಗಿದ್ದ ಎಎಸ್‌ ಪಿ ನಾರಾಯಣ ವಿ. ಭರಮನಿ ಸ್ವಯಂ ರಾಜೀನಾಮೆ - Mahanayaka
11:59 AM Wednesday 10 - December 2025

ಸಿಎಂ ಸಿದ್ದರಾಮಯ್ಯ ಸಿಟ್ಟಿಗೆ ಗುರಿಯಾಗಿದ್ದ ಎಎಸ್‌ ಪಿ ನಾರಾಯಣ ವಿ. ಭರಮನಿ ಸ್ವಯಂ ರಾಜೀನಾಮೆ

siddaramaiah
02/07/2025

ಧಾರವಾಡ: ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿ ಧಾರವಾಡ ಎಎಸ್‌ ಪಿ ನಾರಾಯಣ ವಿ. ಭರಮನಿ ಅವರಿಗೆ ಹೊಡೆಯಲು ಕೈ ಎತ್ತಿದ ಘಟನೆ ಇತ್ತೀಚೆಗೆ ನಡೆದಿತ್ತು. ಇದೀಗ ಎಎಸ್‌ ಪಿ ನಾರಾಯಣ.ವಿ.ಭರಮನಿ ಸ್ವಯಂ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈಗಾಗಲೇ ನಾರಾಯಣ ವಿ. ಭರಮನಿ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಅವರ ಮನವೊಲಿಸುವ ಕಾರ್ಯವು ಪೊಲೀಸ್‌ ಇಲಾಖೆ ಹಿರಿಯ ಅಧಿಕಾರಿಗಳಿಂದ ನಡೆಯುತ್ತಿದೆ ಎನ್ನಲಾಗಿದೆ.

ಈ ನಡುವೆ ಸಿಎಂ ವೇದಿಕೆ ಮೇಲೆ ಅವಮಾನ ಮಾಡಿದ್ದಕ್ಕೆ ಬೇಸರಗೊಂಡು ನಾರಾಯಣ ವಿ. ಭರಮನಿ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಹೊಡೆಯಲು ಕೈ ಎತ್ತಿದ್ದ ಸಿಎಂ!

ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವೇದಿಕೆಗೆ ಕರೆದು ಹೊಡೆಯಲು ಕೈ ಎತ್ತಿದ್ದು ವಿವಾದಕ್ಕೆ ಕಾರಣವಾಗಿತ್ತು. ವೇದಿಕೆ ಮೇಲೆ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗೆ “ಏಯ್‌.. ಯಾರಿಲ್ಲಿ ಎಸ್‌ಪಿ?” ಎಂದು ಕೂಗಿ ಕೈ ಎತ್ತಲು ಮುಂದಾದರು. ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಸಿದ್ದರಾಮಯ್ಯ ಕೋಪಗೊಂಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ