7:37 PM Wednesday 15 - October 2025

ಆಸ್ಪತ್ರೆಯ ಕಿಟಕಿಯ ಗ್ರಿಲ್ ಮುರಿದು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ!

mysore hospital
10/07/2021

ಮೈಸೂರು: ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳನುಗ್ಗಿದ ವ್ಯಕ್ತಿಯೋರ್ವ 30 ವರ್ಷ ವಯಸ್ಸಿನ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ರಾತ್ರಿ ವೇಳೆ ಕಿಟಕಿ ಮೂಲಕ ಆಸ್ಪತ್ರೆಯ ಒಳಗೆ ನುಗ್ಗುತ್ತಿದ್ದ ದುಷ್ಕರ್ಮಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಂತ್ರಸ್ತ ಮಹಿಳೆಯ ಸಂಬಂಧಿಕರು ಮಾಹಿತಿ ನೀಡಿದರೂ ವೈದ್ಯರು ಕ್ರಮಕೈಗೊಂಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನೂ ಕೆ.ಆರ್.ಆಸ್ಪತ್ರೆಯ ವೈದ್ಯರು ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎನ್ನುವ ಆರೋಪವನ್ನು ಮಹಿಳೆಯ ಸಂಬಂಧಿಕರು ಮಾಡಿದ್ದಾರೆ ಎಂದು ಹೇಳಲಾಗಿದೆ.

ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದ್ದು,  ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದರೂ, ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ ಮಾಡಿ, ಈ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಲಾಗಿದೆ ಎಂದು ಹೇಳಲಾಗಿದೆ.

ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದೆ.  ಇನ್ನೂ ವಿಚಾರ ಬಹಿರಂಗವಾಗುತ್ತಿದ್ದಂತೆಯೇ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದು, ಪೊಲೀಸರು ಬಂದರೂ ವೈದ್ಯರು ಬಂದಿಲ್ಲ, ನರ್ಸ್ ಗಳು ಕೂಡ ಸ್ಥಳದಲ್ಲಿಲ್ಲ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version