ತಂದೆಗೆ ರಾಡ್ ನಿಂದ ಹಲ್ಲೆ ಮಾಡಿದ ಪುತ್ರ | ಆಸ್ಪತ್ರೆಗೆ ಸೇರಿದ ತಂದೆ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ - Mahanayaka
4:41 AM Saturday 18 - October 2025

ತಂದೆಗೆ ರಾಡ್ ನಿಂದ ಹಲ್ಲೆ ಮಾಡಿದ ಪುತ್ರ | ಆಸ್ಪತ್ರೆಗೆ ಸೇರಿದ ತಂದೆ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

20/12/2020

ಮಂಗಳೂರು: ಮಗ ಹಲ್ಲೆ ಮಾಡಿದನೆಂದು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಆಸ್ಪತ್ರೆಯಲ್ಲಿ ನಡೆದಿದೆ.


Provided by

ಲಕ್ಷ್ಮಣ ಗೌಡ(69) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಡಿಸೆಂಬರ್ 1ರಂದು ಮಗ ಹಾಗೂ ಲಕ್ಷ್ಮಣ ಗೌಡರ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದ್ದು, ಈ ವೇಳೆ ಮಗ ಲಕ್ಷ್ಮಣ ಗೌಡರಿಗೆ ರಾಡ್ ನಿಂದ ಹಲ್ಲೆ ನಡೆಸಿದ್ದನೆನ್ನಲಾಗಿದೆ. ಇದರಿಂದ ಗಾಯಗೊಂಡಿದ್ದ ಅವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಗ ರಾಡ್ ನಿಂದ ಹಲ್ಲೆ ನಡೆಸಿದ ವಿಚಾರಕ್ಕೆ ಲಕ್ಷ್ಮಣ ಗೌಡರು ತೀವ್ರವಾಗಿ ನೊಂದಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಡಿಸೆಂಬರ್ 19ರಂದು ಸೊಸೆ ಆಹಾರ ತರಲು ಹೊರ ಹೋಗಿದ್ದ ಸಂದರ್ಭದಲ್ಲಿ ಆಸ್ಪತ್ರೆಯ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಮೃತರ ಪತ್ನಿ ದೂರ ನೀಡಿದ್ದು,  ಲಕ್ಷ್ಮಣ ಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಅವರ  ಮಾನಸಿಕ ಅಸ್ವಸ್ಥ ಪುತ್ರ ಹಾಗೂ ಸೊಸೆ ನಿರಂತರವಾಗಿ ಜಗಳವಾಡಿ ಮನೆಯಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ