12:09 PM Thursday 16 - October 2025

ಮುಸ್ಲಿಂ ವಿವಾಹ ನೋಂದಣಿಯನ್ನು ಖಾಝಿಗಳು/ ಮೌಲ್ವಿಗಳು ಮಾಡಬಾರದಂತೆ: ಹೊಸ ಮಸೂದೆಗೆ ಅಸ್ಸಾಂ ಸಚಿವ ಸಂಪುಟ ಅನುಮೋದನೆ

22/08/2024

ಖಾಝಿಗಳು ಅಥವಾ ಮೌಲ್ವಿಗಳು ಮುಸ್ಲಿಮರ ಮದುವೆಗಳನ್ನು ನೋಂದಾಯಿಸುವುದನ್ನು ನಿಷೇಧಿಸುವ ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮುಸ್ಲಿಂ ವಿವಾಹ ನೋಂದಣಿ ಮಸೂದೆ – 2024, ಬಾಲ್ಯ ವಿವಾಹಗಳ ನೋಂದಣಿಯನ್ನು ಸಹ ನಿಷೇಧಿಸುತ್ತದೆ.
ಮುಸ್ಲಿಂ ವೈಯಕ್ತಿಕ ಕಾನೂನುಗಳ ಕೆಲವು ನಿಬಂಧನೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ಶುಕ್ರವಾರ ಅಸ್ಸಾಂ ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲಾಗುವುದು. ಹೊಸ ಕಾನೂನಿನ ಪ್ರಕಾರ, ಮುಸ್ಲಿಂ ವಿವಾಹಗಳ ನೋಂದಣಿಯನ್ನು ಸಬ್ ರಿಜಿಸ್ಟ್ರಾರ್ ಮಾಡುತ್ತಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳನ್ನು ಒಳಗೊಂಡ ಯಾವುದೇ ಮದುವೆಯನ್ನು ನೋಂದಾಯಿಸಲಾಗುವುದಿಲ್ಲ ಎಂದು ನಾವು ಮಸೂದೆಯನ್ನು ಪರಿಚಯಿಸಿದ್ದೇವೆ. ಅಲ್ಲದೇ, ನೋಂದಣಿಯ ಅಧಿಕಾರವನ್ನು ಖಾಜಿಯಿಂದ ಸಬ್ ರಿಜಿಸ್ಟ್ರಾರ್ ಗೆ ವರ್ಗಾಯಿಸಲಾಗುವುದು” ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮುಸ್ಲಿಂ ವಿವಾಹ ಮತ್ತು ವಿಚ್ಛೇದನದ ಕಾರ್ಯವಿಧಾನಗಳನ್ನು ಖಾಝಿಗಳು ಅಥವಾ ಧರ್ಮಗುರುಗಳು ಮೇಲ್ವಿಚಾರಣೆ ಮಾಡುತ್ತಾರೆ. ಈ ವರ್ಷದ ಆರಂಭದಲ್ಲಿ ಸರ್ಕಾರವು 1935 ರ ಅಸ್ಸಾಂ ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನ ನೋಂದಣಿ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ರದ್ದುಗೊಳಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version