ಅಸ್ಸಾಂನಲ್ಲಿ ಮುಸ್ಲಿಮರ ಮೇಲೆ ಕೆಂಗಣ್ಣು: ಹಿಂದೂ-ಮುಸ್ಲಿಮರ ನಡುವೆ ಭೂಮಿ ಮಾರಾಟಕ್ಕೆ ಬೇಕಂತೆ ಸರ್ಕಾರದ ಪರ್ಮಿಶನ್..!
ಅಸ್ಸಾಂನಲ್ಲಿ ಮುಸ್ಲಿಮರಿಗೆ ಭೂಮಿ ಮಾರಾಟ ಮಾಡುವುದನ್ನು ತಡೆಯುವುದಕ್ಕೆ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಹಿಮಂತ್ ಬಿಶ್ವ ಶರ್ಮ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಮರ ನಡುವೆ ಭೂಮಿ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಕ್ಕೆ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ ಎಂದವರು ಹೇಳಿದ್ದಾರೆ.
ಹಾಗೆಯೇ ಲವ್ ಜಿಹಾದ್ ಪ್ರಕರಣಕ್ಕೆ ಜೀವಾವಧಿ ಶಿಕ್ಷೆಯನ್ನು ವಿಧಿಸುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ನಾವು ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೇ ಈ ಕುರಿತಂತೆ ಜನರಿಗೆ ಹೇಳಿದ್ದೆವು, ಮುಂದಿನ ದಿನಗಳಲ್ಲಿ ಲವ್ ಜಿಹಾದ್ ಗೆ ಸಂಬಂಧಿಸಿ ಜೀವಾವಧಿ ಶಿಕ್ಷೆ ಕೊಡುವ ಕಾನೂನನ್ನು ಜಾರಿಗೊಳಿಸುತ್ತೇವೆ ಎಂದವರು ಹೇಳಿದ್ದಾರೆ.
ಈ ಹಿಂದೆ ಹಿಂದೂ ಮತ್ತು ಮುಸ್ಲಿಮರ ನಡುವೆ ಭೂಮಿ ಮಾರಾಟ ಖರೀದಿಗಳು ನಡೆದಿವೆ. ಇಂಥ ವ್ಯವಹಾರಗಳನ್ನು ತಡೆಯಲು ಸರಕಾರಕ್ಕೆ ಸಾಧ್ಯವಿಲ್ಲ. ಆದರೆ ಹಿಂದೂವಿನ ಭೂಮಿಯನ್ನು ಓರ್ವ ಮುಸ್ಲಿಂ ಮರಳಿ ಖರೀದಿಸುವುದು ಮತ್ತು ಮಾರಾಟ ಮಾಡುವುದಕ್ಕೆ ಮುಖ್ಯಮಂತ್ರಿಯವರ ಅನುಮತಿ ಬೇಕಾಗುತ್ತದೆ ಎಂಬ ನಿಯಮ ಜಾರಿಗೊಳಿಸುತ್ತೇವೆ ಎಂದವರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth