ಲೇಡಿ ಸಿಂಗಂ ಖ್ಯಾತಿಯ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಸಾವು - Mahanayaka
11:01 AM Saturday 23 - August 2025

ಲೇಡಿ ಸಿಂಗಂ ಖ್ಯಾತಿಯ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ಸಾವು

cop junmoni rabha
17/05/2023


Provided by

ನಾಗಾಂವ್: ಅಸ್ಸಾಂನಲ್ಲಿ ಲೇಡಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ನಾಗಾಂವ್ ಜಿಲ್ಲೆಯಲ್ಲಿ ರಾಭಾ ಪ್ರಯಾಣಿಸುತ್ತಿದ್ದ ಕಾರಿಗೆ  ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಮ್ಮ ಖಾಸಗಿ ಕಾರಿನಲ್ಲಿ ರಾಭಾ ಅವರು ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.  ಈ ವೇಳೆ ಅವರು ಸಮವಸ್ತ್ರದಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.

ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಕಂಟೈನರ್ ಟ್ರಕ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಇನ್ನೂ ಜುನ್ಮೋನಿ ರಾಭಾ ಅವರು ಬಾಲಿವುಡ್ ಸಿನಿಮಾಗಳ ಪಾತ್ರಗಳಾದ ಲೇಡಿ ಸಿಂಗಂ, ದಬಾಂಗ್ ಕಾಪ್ ಮೊದಲಾದ ಹೆಸರಿನಲ್ಲಿ ಜನಪ್ರಿಯತೆ ಪಡೆದಿದ್ದರು. ಇದು ಆಕಸ್ಮಿಕ ಅಪಘಾತವೇ ಅಥವಾ ಯೋಜಿತ ಕೊಲೆಯೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ