ನಿರುದ್ಯೋಗ, ಭ್ರಷ್ಟಾಚಾರದಲ್ಲಿ ಹರಿಯಾಣವನ್ನು ಬಿಜೆಪಿ ಅಗ್ರಸ್ಥಾನಕ್ಕೆ ತಂದಿದೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಸಂಸದ ವಾಗ್ದಾಳಿ
ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯ ಬೆನ್ನಲ್ಲೇ ರಾಜಕೀಯ ಗಲಾಟೆ ಜೋರಾಗಿದೆ. ಕಾಂಗ್ರೆಸ್ ಸಂಸದ ದೀಪೇಂದರ್ ಸಿಂಗ್ ಹೂಡಾ ಅವರು ಬಿಜೆಪಿ ಪಕ್ಷವನ್ನು ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ಪಕ್ಷವು ರಾಜ್ಯದ ಅಭಿವೃದ್ಧಿಯನ್ನು ದುರ್ಬಲಗೊಳಿಸಿದೆ ಮತ್ತು ನಿರುದ್ಯೋಗ, ಮಾದಕ ವ್ಯಸನ, ಅಪರಾಧ ಮತ್ತು ಭ್ರಷ್ಟಾಚಾರದಲ್ಲಿ ಹರಿಯಾಣದಲ್ಲಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಭಾನುವಾರ ಅಂಬಾಲಾ ಕಂಟೋನ್ಮೆಂಟ್ ನಲ್ಲಿ ಕಾಂಗ್ರೆಸ್‌ನ “ಹರಿಯಾಣ ಮಾಂಗೆ ಹಿಸಾಬ್” ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರೋಹ್ಟಕ್ ಸಂಸದರು ಪ್ರಸ್ತುತ ಹರಿಯಾಣ ಸರ್ಕಾರ ಮತ್ತು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದರು. ಬಿಜೆಪಿ ಹಲವಾರು ಘೋಷಣೆಗಳನ್ನು ಮಾಡಿದೆ. ಆದರೆ ಅವುಗಳಲ್ಲಿ ಯಾವುದನ್ನೂ ಕಾರ್ಯಗತಗೊಳಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
“ಈ ಪ್ರಕಟಣೆಗಳು ಸುಳ್ಳು. ಇದನ್ನು ಕಾರ್ಯಗತಗೊಳಿಸಲು ಸಾಧ್ಯವಿಲ್ಲ. ಬಿಜೆಪಿ ಪಕ್ಷವು ಈ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶವನ್ನು ಎಂದಿಗೂ ಹೊಂದಿಲ್ಲ” ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth