ಡೇಟ್ ಫಿಕ್ಸ್: ಹರ್ಯಾಣ ಹಾಗೂ ಜಮ್ಮು & ಕಾಶ್ಮೀರದಲ್ಲಿನ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ
ಹರ್ಯಾಣ ಹಾಗೂ ಜಮ್ಮು & ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ಹರ್ಯಾಣದಲ್ಲಿ ಅಕ್ಟೋಬರ್ 1 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಜಮ್ಮು & ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದುಅ.4 ರಂದು ಮತಎಣಿಕೆ ನಡೆಯಲಿದೆ.
ಜಮ್ಮು-ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಿಂದ 3 ಹಂತಗಳಲ್ಲಿ ವೋಟಿಂಗ್ ನಡೆಯಲಿದೆ. ಹರಿಯಾಣದಲ್ಲಿ ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಎರಡೂ ರಾಜ್ಯಗಳ ಫಲಿತಾಂಶ ಹೊರಬೀಳಲಿದೆ.
ಜಮ್ಮುಕಾಶ್ಮೀರದಲ್ಲಿ 90 ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಹರಿಯಾಣದಲ್ಲಿ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ . ಈ ಕುರಿತು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾತನಾಡಿ ಮಾಹಿತಿ ನೀಡಿದರು.
ಹರ್ಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆಯ ಅವಧಿ ಕ್ರಮವಾಗಿ ನವೆಂಬರ್ 3 ಮತ್ತು ನವೆಂಬರ್ 26ಕ್ಕೆ ಮುಕ್ತಾಯವಾಗಲಿದೆ. ಆದರೆ ಮಹಾರಾಷ್ಟ್ರವನ್ನು ಚುನಾವಣೆಯಿಂದ ದೂರ ಇಟ್ಟಿದ್ದು ಯಾಕೆ ಎಂದು ಸ್ಪಷ್ಟವಾಗಿಲ್ಲ. ಜಾರ್ಖಂಡ್ ವಿಧಾನಸಭೆಯ ಅವಧಿ 2025ರ ಜನವರಿಯಲ್ಲಿ ಮುಕ್ತಾಯವಾಗಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸುಪ್ರೀಂಕೋರ್ಟ್ ನೀಡಿದ ಗಡುವು ದಿನಾಂಕವಾದ ಸೆಪ್ಟೆಂಬರ್ 30ರ ಒಳಗಾಗಿ ಚುನಾವಣೆ ನಡೆಸಲು ಕೂಡಾ ಆಯೋಗ ನಿರ್ಧರಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth