ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ: ಎಲ್ಲೆಡೆ ಮತದಾನ ಶುರು
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ.
ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ.
ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ್, ನಟಿ ಅಮೂಲ್ಯ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ಸೇರಿದಂತೆ ಗಣ್ಯರು ಮತಗಟ್ಟೆಗೆಆಗಮಿಸಿ ಮತದಾನ ಮಾಡಿದ್ದಾರೆ.
ಇನ್ನು ಮೈಸೂರಿನ ಚಾಮುಂಡಿಪುರಂನಲ್ಲಿ 96 ವರ್ಷದ ಅಜ್ಜಿ ಮತದಾನ ಮಾಡಿದರು. ಮತಗಟ್ಟೆ ಸಂಖ್ಯೆ 23, ಮೈಸೂರಿನ ಚಾಮುಂಡಿಪುರಂನಲ್ಲಿ 96 ವರ್ಷದ ಅಜ್ಜಿ ಮತಗಟ್ಟೆಗೆ ಬಂದು ಮತದಾನ ಮಾಡಿದರು.
ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಮತಗಟ್ಟೆ ಸಂಖ್ಯೆ 139, ಸಿಎಫ್ ಟಿ ಆರ್ ಐ ಶಾಲೆಯಲ್ಲಿ ಮತದಾನ ಮಾಡಿದರು. ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಮತದಾನ ಮಾಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























